ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ
ವೃದ್ಧಾಶ್ರಮದ ಅಂಗಳ ತಮ್ಮ ಮನೆ. ಆವತ್ತು ಭಾವನಾಳೊಡನೆ ಮನೆ ಬಿಟ್ಟು ಹೋಗುವಾಗ ಅಪ್ಪ ಆರಾಮ ಕುರ್ಚಿಯ ಮೇಲೆ ನಿರ್ಲಿಪ್ತವಾಗಿ ಕೂತಿದ್ದರು. ಅಮ್ಮ ಕಣ್ಣಿನಲ್ಲಿ ನೀರು ತುಂಬಿಕೊಂಡು ನೋಡುತ್ತ ನಿಂತಿದ್ದರು. ಹದಿಮೂರು ಜನ ವೃದ್ಧ-ವೃದ್ಧೆಯರೂ ನಮ್ಮನ್ನೆ ನೋಡುತ್ತ ನಿಂತಿದ್ದರು. ಏಕೋ ನನ್ನಲ್ಲಿ ಅಳುಕು. ಭಾವನಾ ಸರಸರನೇ ಹೆಜ್ಜೆ ಹಾಕಿ ಕಾರಿನಲ್ಲಿ ಕುಳಿತುಬಿಟ್ಟಿದ್ದಳು. ಲಚ್ಚಿ ಆಗ ಗರ್ಭಿಣಿ. ನನ್ನೆಡೆಗೆ ದುರದುರನೆ ದಿಟ್ಟಿಸುತ್ತಿದ್ದಳು.
ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ “ಕ್ಕೊ ಕ್ಕೊ ಕ್ಕೊ…” ನಿಮ್ಮ ಓದಿಗೆ
